Share this news

ಕಾರ್ಕಳ: ಅಡಿಕೆ ಬೆಳೆಯಲ್ಲಿ ರೈತರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸಂಶೋಧನಾ ಕೇಂದ್ರಗಳಲ್ಲಿ ಅಭಿವೃದ್ಧಿಗೊಳಿಸಲಾದ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದೇ ಪರಿಹಾರ ಎಂದು ಅಜೆಕಾರು ಸಹಕಾರಿ ವ್ಯವಸಾಯ ಸೇವಾ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಶಾಂತಿರಾಜ್ ಜೈನ್ ಅಭಿಪ್ರಾಯಪಟ್ಟರು.

ಅವರು ಇಂದು ಅಂಡಾರು ಕರಿಯಾಲು ಶ್ರೀ ವಿಠಲ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನ, ಅಂಡಾರು ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಉಡುಪಿ, ತೋಟಗಾರಿಕೆ ಇಲಾಖೆ, ಕಾರ್ಕಳ, ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ, ನಿಯಮಿತ ಅಜೆಕಾರು, ಗ್ರಾಮ ಪಂಚಾಯತ್ ವರಂಗ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ), ಅಂಡಾರು ಇವರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ “ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಲ್ಲಿ ಸಮಗ್ರ ರೋಗ ಹಾಗೂ ಕೀಟ ನಿರ್ವಹಣೆ” ಕುರಿತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವರಂಗ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ ಅಮೀನ್ ವಹಿಸಿದ್ದರು.
ಈ ಸಂದರ್ಭದಲ್ಲಿ ವರಂಗ ಗ್ರಾಮ ಪಂಚಾತ್ ಉಪಾಧ್ಯಕ್ಷರಾದ ಪ್ರಮೀಳಾ ನಾಯ್ಕ್, ಅಜೆಕಾರು ಸಹಕಾರಿ ವ್ಯವಸಾಯ ಸೇವಾ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾದ ಪ್ರಶಾಂತ ಶೆಟ್ಟಿ, ಅಂಡಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ರವೀಂದ್ರ ಪಿ, ಕರಿಯಾಲು ವಿಠಲ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಹಾವೀರ ಹೆಗ್ಡೆ, ತೋಟಗಾರಿಕೆ ಉಪನಿರ್ದೇಶಕರಾದ ಭುವನೇಶ್ವರಿ, ಸಹಾಯಕ ಕೃಷಿ ನಿರ್ದೇಶಕರಾದ ಗೋವಿಂದ ನಾಯ್ಕ, ಕಡ್ತಲ ಗ್ರಾಮ ಪಮಚಾಯತ್ ಅಧ್ಯಕ್ಷರಾದ ಸುಕೇಶ ಹೆಗ್ಡೆ, ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ದೇವಾಡಿಗ ಹಾಗೂ ಮರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾವತಿ ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು.

ವಿಚಾರ ಸಂಕಿರಣದ ತಾಂತ್ರಿಕ ಅಧಿವೇಶನದಲ್ಲಿ ಸಿ.ಪಿ.ಸಿ.ಆರ್.ಐ ವಿಟ್ಲದ ಹಿರಿಯ ವಿಜ್ಞಾನಿಗಳಾದ ಡಾ| ನಾಗರಾಜ ಎಸ್. ಆರ್ ರವರು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಲ್ಲಿ ಸಮಗ್ರ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ಪೆರೋಡಿ ನಾರಾಯಣ ಭಟ್ಟ ತೋಟಗಳಲ್ಲಿ ಪೊಷಕಾಂಶಗಳ ನಿರ್ವಹಣೆ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು. ರೈತರೊಂದಿಗೆ ಸಂವಾದದೊAದಿಗೆ ವಿಚಾರ ಸಂಕಿರಣವನ್ನು ಸಮಾಪ್ತಿಗೊಳಿಸಲಾಯಿತು.

ಪ್ರಶಾಂತ ಶೆಟ್ಟಿ ರವರು ಸ್ವಾಗತಿಸಿದರು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಬಿ.ವಿ ರವರು ವಂದಿಸಿದರು. ಹರೀಶ ರವರು ಕಾರ್ಯಕ್ರಮ ನಿರೂಪಿಸಿದರು

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *