Share this news

ಬೆಂಗಳೂರು, ನ,04 : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎಚ್ ವೈ ಮೇಟಿ (79) ಮಂಗಳವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಮೇಟಿಯವರ ಆರೋಗ್ಯ ವಿಚಾರಿಸಿ ಬಂದಿದ್ದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮೇಟಿಯವರು, ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್?ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.
2008ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿAದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮೇಟಿ, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿAದ ಸ್ಫರ್ಧಿಸಿ ಜಯಗಳಿಸಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *