
ಜಮ್ಮು & ಕಾಶ್ಮೀರ: ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಪಾಕ್ ದಾಳಿಗೆ ಭಾರತ ಪ್ರತಿದಾಳಿಯನ್ನು ನಡೆಸುತ್ತಿದೆ. ಈಗಾಗಲೇ ಆಪರೇಷನ್ ಸಿಂದೂರ್ದ ಮೂಲಕ ಪಾಕ್ ಉಗ್ರರಿಗೆ ಭಾರತದ ನಾಗರಿಕರನ್ನು ಹತ್ಯೆ ಮಾಡಿದ್ದಕ್ಕೆ ಭಾರತದ ಸೇನೆ ಸರಿಯಾದ ಉತ್ತರ ನೀಡಿದ್ದಾರೆ. ಆದಾಗ್ಯೂ ಮತ್ತೆ ಪಾಕ್ ಜಮ್ಮು-ಕಾಶ್ಮೀರದ ಮೇಲೆ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ.ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.
ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ಜತೆಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ. ಈ ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.
ಇಂದು ಮುಂಜಾನೆ ಪಾಕ್ ಜಮ್ಮುನ ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತರ ಮನೆ ಮೇಲೆ ದಾಳಿಯನ್ನು ನಡೆಸಿದ್ದಾರೆ. ನೆರವಾಗಿ ಶೆಲ್ ಅವರ ಮನೆಯ ಮೇಲೆ ಅಪ್ಪಳಿಸಿದೆ. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು ಸಾವನ್ನಪ್ಪಿದ್ದಾರೆ. ದಾಳಿಯ ನಂತರ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರಿಗೆ ಬೇಕಾದ ಎಲ್ಲ ಚಿಕಿತ್ಸೆಯನ್ನು ನೀಡಲಾಗಿದೆ. ವೈದ್ಯರು ಅವರನ್ನು ಉಳಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಿದ್ರು ಅವರು ಸಾವನ್ನಪ್ಪಿದ್ದಾರೆ ಎಂದು ಜಮ್ಮು-ಕಾಶ್ಮೀರದ ಅಧಿಕಾರಿಗಳು ಹೇಳಿದ್ದಾರೆ.




