Share this news

 

 

ಕಾರ್ಕಳ, ಜ.27: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನ ಎರಡು ಕಡೆ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಡಾರು ಗ್ರಾಮದ ಬಜಗೋಳಿಯ ಶೀನ ಪೂಜಾರಿ(48) ಎಂಬವರು ಪಿತ್ತಕೋಶ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಮದ್ಯಪಾನ ಮಾಡುವ ಚಟ ಹೊಂದಿದ್ದರು. ಕೆಲ ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದವರು ತನಗಿರುವ ಖಾಯಿಲೆ ಹಾಗು ಸಾಲಭಾದೆಗೆ ಬೇಸತ್ತು ಜ.26 ರಂದು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಎರ್ಲಪಾಡಿಯ ಸುದೇಶ್ (30) ಎಂಬ ಯುವಕ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ನಿಟ್ಟೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸೋಮವಾರ (ಜ.26) ಮನೆಯವರು ಕೃಷಿ ಕೆಲಸದಲ್ಲಿದ್ದ ವೇಳೆ ಸುದೇಶ ವಿಷ ಸೇವಿಸಿ ಅಸ್ವಸ್ಥನಾಗಿದ್ದು, ಕೂಡಲೇ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಸಂಜೆಯ ವೇಳೆಗೆ ಮೃತಪಟ್ಟಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *