Share this news

ಕಾರ್ಕಳ: ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಕ್ಕುಂದೂರು ನಿವಾಸಿ ಸರೋಜಿನಿ (73) ಎಂಬವರು ಸುಮಾರು 8 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಖಾಯಿಲೆ ಗುಣವಾಗದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಸೋಮವಾರ ಕಸಬಾ ಗ್ರಾಮದ ಪತ್ತೊಂಜಿಕಟ್ಟೆಯ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ ಕಾರ್ಕಳ ತಾಲೂಕು ಮುಂಡ್ಕೂರಿನ ಉಮೇಶ್‌ (55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಕಣ್ಣಿನ ದೃಷ್ಠಿಯ ಸಮಸ್ಯೆ ಇದ್ದು ಪತ್ನಿ ಚಿಕಿತ್ಸೆಗೆ ಕರೆದರೂ ಹೋಗದೆ ಅದೇ ಕಾರಣಕ್ಕೆ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು.

ಮಾನಸಿಕವಾಗಿ ನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಸೋಮವಾರ ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *