ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನಲ್ಲಿ ಕುಕ್ಕುಂದೂರು ಗ್ರಾಮದ ನಿವಾಸಿ ಹಾಲಮ್ಮ (32) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಆದರೆ ಇದೇ ಕಾರಣಕ್ಕೆ ಮನನೊಂದು ಡಿ.3 ರಂದು ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಉರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಹೆಬ್ರಿಯ ಜಲಜಾ(82) ಎಂಬವರು ವಿಪರೀತ ಬೆನ್ನು ನೋವು, ಮೋಣಕಾಲು ನೋವು ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು ವಾಸಿಯಾಗಿರಲಿಲ್ಲ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.3 ರಂದು ಮನೆಯ ಚಾವಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.