Share this news

ನವದೆಹಲಿ,ಫೆ.02: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ವಿವಾದ ಇತ್ಯರ್ಥಕ್ಕೆ ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಫೆಬ್ರವರಿ 2, 2026 ರಂದು ಹೊರಡಿಸಿದ ಈ ಆದೇಶದಲ್ಲಿ, ಒಂದು ತಿಂಗಳೊಳಗೆ ನ್ಯಾಯಾಧಿಕರಣ ಸ್ಥಾಪಿಸಿ ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮನಾಥ ಹಾಗೂ ನ್ಯಾಯಮೂರ್ತಿ ಎನ್. ವಿ ಅಂಜಾರಿಯ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ಒಂದು ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ. ವಾದ ಮಂಡನೆ ವೇಳೆ ಕರ್ನಾಟಕ ಸರ್ಕಾರ ನ್ಯಾಯಾಧಿಕರಣ ರಚನೆ ಬೇಡ ಅಂತ ಹೇಳಿದ್ದು, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಅಂತ ಹೇಳಿತ್ತು.

ಆದರೆ ತಮಿಳುನಾಡು ಸರ್ಕಾರ ನ್ಯಾಯಾಧೀಕರಣ ರಚಿಸುವಂತೆ ವಾದಿಸಿತ್ತು. ಆಗ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರದ ವಾದವನ್ನು ಪುರಸ್ಕರಿಸಿತ್ತು. ಕಳೆದ ಡಿಸೆಂಬರ್ ನಲ್ಲಿ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಪೆನ್ನಾರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿ, ಕೋಲಾರ ಜಿಲ್ಲೆಯ ಯರಗೋಳ ಬಳಿ ಡ್ಯಾಮ್ ನಿರ್ಮಿಸುತ್ತಿರುವುದನ್ನು ತಮಿಳುನಾಡು ಆಕ್ಷೇಪಿಸಿತ್ತು. ಡ್ಯಾಮ್ ನಿಂದ ನೀರಿನ ಕೊರತೆ ಆಗುತ್ತೆ ಎಂದು ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *