
ವಿಜಯಪುರ,ಏ.08: ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮೂಲದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿರುವ ಈ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಮಹಿಳೆಯೇ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.ಮಠಕ್ಕೆ ಕರೆಸಿ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಆ ವಿಡಿಯೋ ಮಾಡಿಕೊಂಡು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಎಷ್ಟೇ ಹುಡುಕಾಡುತ್ತಿದ್ದರೂ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿದು ಬಂದಿದೆ.
ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು, ಸಂತ್ರಸ್ತ ಮಹಿಳೆಯಿಂದ ಅಧಿಕೃತ ದೂರು ಪಡೆಯಲು ಮುಂದಾಗಿದ್ದಾರೆ. ಆದರೆ ಮಹಿಳೆ ಮಾತ್ರ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಪೊಲೀಸರು ಎಷ್ಟೇ ಸಂಪರ್ಕಕ್ಕೆ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಮಹಿಳೆಯ ಅಧಿಕೃತ ನಿವಾಸಕ್ಕೂ ಪೊಲೀಸರು ತೆರಳಿ ಪರಿಶೀಲನೆ ಮಾಡಿದರೂ ಸಹ ಪತ್ತೆಯಾಗಿಲ್ಲ. ಮಹಿಳೆ ಫೋನ್ ನಂಬರ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಪೊಲೀಸರು ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ತನ್ನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೇ ಅತ್ತ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ತಮ್ಮ ಶಿಷ್ಯನ ಮೂಲಕ ಸ್ವಾಮೀಜಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಹಲ್ಲೆ ನಡೆಸಿ ನಂತರ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಶಿಷ್ಯ ಸಂತೋಷ ಮಂಜಣ್ಣಿ ಮೂಲಕ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆಯು ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದಳು. ನನ್ನ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ನೀಡುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಬೆಂಗಳೂರಿನ ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೇ ಅತ್ತ ವಿಜಯಪುರಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಸಹ ಮಹಿಳೆ ಸೇರಿದಂತೆ ಇತರರ ವಿರುದ್ಧ ಹನಿಟ್ರ್ಯಾಪ್ ದೂರು ನೀಡಿದ್ದು, ಈ ಸಂಬAಧ ವಿಜಯಪುರ ಪೊಲೀಸರು ಎಫ್ಐಆರ್ ದಾಖಸಿಕೊಂಡು ಮಹಿಳೆ ಹಾಗೂ ಖಾಸಗಿ ಚಾನಲ್ ಎಂಡಿ ಸೇರಿದಂತೆ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.ಸ್ವಾಮೀಜಿ ನೀಡಿದ ದೂರಿನಿಂದ ಹೆದರಿ ಮಹಿಳೆ ತಲೆಮರೆಸಿಕೊಂಡಳೇ ಎನ್ನುವ ಅನುಮಾನ ಮೂಡಿದೆ.
















.
.
.
.
.
.
.
.
.
.
