ಕಾರ್ಕಳ: ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಾಂತಿರಾಜ್ ಜೈನ್ ಶಿಲಾಲು ಹಾಗೂ ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಕುಂಠಿನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿ ಸುನಿಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಕಳೆದ ಜ .11 ರಂದು ನಿರ್ದೇಶಕ ಮಂಡಳಿಗೆ ಚುನಾವಣೆ ನಡೆದು ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡವು ಎಲ್ಲಾ 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು.