Share this news

ಉಡುಪಿ, ಅ,03: ವಿಜಯದಶಮಿಯ ಸಂಭ್ರಮದ ಸಂದರ್ಭದಲ್ಲಿ ಮಣಿಪಾಲದ ವಿದ್ಯಾನಗರದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಲ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾಪದವಿ ಪೂರ್ವಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ ಸುಧೆಯಗೀತಗಾಯನ, ಸಾಂಸ್ಕೃತಿಕಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್‌ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲ ರವಿ ಜಿ, ಹೇಮಂತ್ , ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಸಂತೋಷ್, ಉಪಪ್ರಾಂಶುಪಾಲ ಪ್ರಕಾಶ್‌ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿಪಾಲ್ಗೊಂಡರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾಕಾರ್ಯಕ್ರಮ ನಿರೂಪಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *