Share this news

ಕಾರ್ಕಳ, ಅ.06: ಶಿರ್ಲಾಲು ಗ್ರಾಮದ ಹೈನುಗಾರ ಮಹಿಳೆ ಜಯಶ್ರೀ ಎಂಬವರ ಮನೆಯ ಆವರಣಕ್ಕೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಬಲವಂತವಾಗಿ ದನಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳದ ಮೊಹಮ್ಮದ್, ಮೂಡಬಿದ್ರೆಯ ಮಹಮ್ಮದ್ ನಾಸಿರ್ ಹಾಗೂ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು.
ಕಳೆದ ಎರಡು ವಾರದ ಹಿಂದೆ ಶಿರ್ಲಾಲಿನ ಜಯಶ್ರೀ ಎಂಬವರ ಮನೆಯ ಆವರಣಕ್ಕೆ ತಡರಾತ್ರಿ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಹಟ್ಟಿಯಿಂದ ದನ ಕಳ್ಳತನಕ್ಕೆ ಯತ್ನಿಸಿದ ವೇಳೆ ನಿದ್ದೆಯಿಂದ ಎಚ್ಚೆತ್ತ ಜಯಶ್ರೀಯವರು ದನಕಳ್ಳತನ ತಡೆಯಲು ಮುಂದಾದಾಗ ತಲವಾರುಗಳನ್ನು ಹಿಡಿದು ಬೆದರಿಕೆ ಹಾಕಿ, ಕೊಟ್ಟಿಗೆಯಲ್ಲಿದ್ದ ಸುಮಾರು 35 ಸಾವಿರ ರೂಪಾಯಿ ಮೌಲ್ಯದ ಮೂರು ಹಸುಗಳನ್ನು ಬಲವಂತವಾಗಿ ಕದ್ದು ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಪ್ರಕರಣದ ಬೆನ್ನತ್ತಿದ್ದ
ಕಾರ್ಕಳ ಎಎಸ್ಪಿ ಡಾ. ಹರ್ಷಾ ಪ್ರಿಯಂವದ ಅವರು ಆರೋಪಿಗಳ ಪತ್ತೆಗೆ ಪೊಲೀಸರಿಗೆ ನಿರ್ದೇಶನ ನೀಡಿದ್ದರು.ಅಜೆಕಾರು ಪಿ.ಎಸ್.ಐ ಮಹೇಶ್ ಟಿ.ಎಂ ಅವರ ನೇತೃತ್ವದ ಪೊಲೀಸರ ತಂಡವು ಆರೋಪಿಗಳ ಜಾಡು ಹಿಡಿದು ಮೂವರು ಕುಖ್ಯಾತ ದನಗಳ್ಳರಾದ ಮೊಹಮ್ಮದ್ ಯೂನಿಸ್, ಮೊಹಮ್ಮದ್ ನಾಸೀರ್ ಹಾಗೂ ಮೊಹಮ್ಮದ್ ಇಕ್ಬಾಲ್ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ ಎರಡು ತಲವಾರುಗಳು, ಮಾರುತಿ ಸ್ವಿಫ್ಟ್ ಕಾರು, ಮಹೀಂದ್ರಾ ಬೋಲೆರೋ ವಾಹನ ಹಾಗೂ ಐದು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳ ಲಾಗಿದೆ.
ಕಾರ್ಯಾಚರಣೆಯಲ್ಲಿ ಅಜೆಕಾರು ಪೊಲೀಸ್ ಠಾಣೆಯ ಸಿಬ್ಬಂದಿ ಸತೀಶ್ ಬೆಳ್ಳೆ, ಪ್ರದೀಪ್ ಶೆಟ್ಟಿ, ಮೂರ್ತಿ ಹೆಬ್ರಿ, ಸುಜೀತ್ ಕುಮಾರ್ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *