ಶಿರ್ವ : ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರದ ಸಮೀಪ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಇಕೋ ಕಾರು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.ಇದರ ಪರಿಣಾಮ ಕಾರಲ್ಲಿದ್ದ ತಂದೆ ಮಗ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಾಳುಗಳನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
K