Share this news

ಹೆಬ್ರಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಕೊಳಗುಡ್ಡೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಎರಡೂ ಕಾರಿನಲ್ಲಿದ್ದ 6 ಮಂದಿ ಗಾಯಗೊಂಡಿದ್ದಾರೆ.

ಹೆಬ್ರಿ ಉಡುಪಿ ರಸ್ತೆಯಲ್ಲಿ ರಸ್ತೆಯಲ್ಲಿ ಮೇ.26 ರಂದು ಈ ಅಪಘಾತ ಸಂಭವಿಸಿದ್ದು, ಹಾವಂಜೆಯ ಮಹೇಂದ್ರ ಅವರು ಪತ್ನಿಯೊಂದಿಗೆ ತಮ್ಮ ಕಾರಿನಲ್ಲಿ ಕೊಪ್ಪ ಕಡೆಗೆ ಹೋಗುತ್ತಿದ್ದಾಗ ಕೊಳಗುಡ್ಡೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ವಾಹನಗಳು ಒಂದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು ಹೆಬ್ರಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಮಹೇಂದ್ರ ಮತ್ತು ಅವರ ಪತ್ನಿ ಮಲ್ಲಿಕ ಹಾಗೂ ಇನ್ನೊಂದು ಕಾರಿನ ಚಾಲಕ ಗೋವಿಂದ ಮತ್ತು ಗಾಯತ್ರಿ, ಸಂಜನಾ, ನಂದಿನಿ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Leave a Reply

Your email address will not be published. Required fields are marked *