
ಹೆಬ್ರಿ,ಫೆ. 27: ಹೆಬ್ರಿ ತಾಲೂಕಿನ ಶಿವಪುರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಪುರ ಗ್ರಾಮದ ನಿವಾಸಿ ಪೂವಪ್ಪ ಪೂಜಾರಿ (83ವ) ಆತ್ಮಹತ್ಯೆಗೆ ಶರಣಾದವರು.
ವಿಪರೀತ ಬೀಡಿ ಸೇದುತ್ತಿದ್ದ ಅವರಿಗೆ ಕ್ಯಾನ್ಸರ್, ಶ್ವಾಸಕೋಶದ ತೊಂದರೆ ಹಾಗೂ ಬಿಪಿ ಸಮಸ್ಯೆ ಇದ್ದು ಚಿಕಿತ್ಸೆ ಕೊಡಿಸಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಫೆ.26 ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
