ಹೆಬ್ರಿ,ಫೆ.15 : ಮುನಿಯಾಲಿನ ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ, ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ ಇವರ ಸಹಕಾರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಡಂದಲೆ ಶ್ರೀಶ ಭಟ್ ಮತ್ತು ಬಳಗದವರಿಂದ ಭಕ್ತಿ ಗಾನ ಕಾರ್ಯಕ್ರಮ ನಡೆಯಿತು. ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.

.
.
.
.
.
.
.
.
.
.
