
ಬೆಂಗಳೂರು,ಮೇ.27: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಂತಿಮ ಹಂತಕ್ಕೆ ತಲುಪಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ಹಾಗೂ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ವಿ. ದೇಶಪಾಂಡೆ ಅವರು, ತಾವೇ ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, “ನಾನು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿರುವುದಾಗಿ ದೇಶಪಾಂಡೆ ಬಹಿರಂಗಪಡಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ನಾಳೆಯೇ ರಾಜೀನಾಮೆ ಕೊಡುವುದಾಗಿ ಹೇಳಿದರು. ಆದರೆ, ನಾವು ಅವರಿಗೆ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದೇವೆ. ಆದರೆ ಅವರು ರಾಜೀನಾಮೆ ನೀಡಬಹುದು ಎಂಬ ಮುನ್ಸೂಚನೆ ನನಗೆ ಸಿಗುತ್ತಿದೆ ಎಂದು ದೇಶಪಾಂಡೆ ಹೇಳಿದ್ದಾರೆ.
ಶಾಸಕರ ಅಭಿಪ್ರಾಯದ ಪ್ರಕಾರ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಬಯಸಿದ್ದಾರೆ ಆದರೆ, ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ಗೆ ಈಗಾಗಲೇ ಮಾತು ಕೊಟ್ಟಿದ್ದು, ಅದನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂಬ ನಿಲುವಿಗೆ ಬಂದಿದ್ದಾರೆ. “ನಾನು ಹೈಕಮಾಂಡ್ಗೆ ಮಾತು ಕೊಟ್ಟಿದ್ದೇನೆ, ಅದನ್ನು ನಾನು ಗೌರವಿಸಲೇಬೇಕು” ಎಂದು ಸಿದ್ದರಾಮಯ್ಯ ಭೇಟಿಯ ವೇಳೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ತಾವು ಮುಖ್ಯಮಂತ್ರಿಗಳಿಗೆ ಯಾವುದೇ ವೈಯಕ್ತಿಕ ಸಲಹೆ ನೀಡಿಲ್ಲ, ಕೇವಲ ಸೌಜನ್ಯದ ಚರ್ಚೆ ನಡೆಸಿದ್ದಾಗಿ ದೇಶಪಾಂಡೆ ಸ್ಪಷ್ಟಪಡಿಸಿದರು. “ನೀವೇ ಸಿಎಂ ಆಗಿ ಮುಂದುವರಿದರೆ ರಾಜ್ಯಕ್ಕೆ ಒಳ್ಳೆಯದು ಎಂದು ನಾನು ಸಿದ್ದರಾಮಯ್ಯ ಅವರಿಗೆ ಹೇಳಿದೆ. ಆದರೆ ಅವರು ಹೈಕಮಾಂಡ್ಗೆ ಈಗಾಗಲೇ ‘ಕಮಿಟ್’ ಆಗಿರುವುದಾಗಿ ತಿಳಿಸಿ, ತಮ್ಮ ರಾಜೀನಾಮೆಯ ನಿರ್ಧಾರಕ್ಕೆ ಬದ್ಧರಾಗಿದ್ದಾರೆ” ಎಂದು ಆರ್. ವಿ. ದೇಶಪಾಂಡೆ ಅವರು ರಾಜಕೀಯ ವಲಯದ ಅತ್ಯಂತ ದೊಡ್ಡ ವಿದ್ಯಮಾನವನ್ನು ಮಾಧ್ಯಮಗಳ ಮುಂದೆ ಹಂಚಿಕೊAಡಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
