ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದ ನ್ಯಾಯಪೀಠವು ಆಗಸ್ಟ್.31ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದರು. ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಅವರು ಶನಿವಾರ ವಾದ ಮಂಡಿಸುವುದಾಗಿ ಕೋರ್ಟ್ಗೆ ತಿಳಿಸಿದರು. ಇದಕ್ಕೆ ಕೋರ್ಟ್ ಸಹ ಒಪ್ಪಿಗೆ ನೀಡಿದೆ. ಇದರೊಂದಿಗೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್, ಆಗಸ್ಟ್ 31 ಬೆಳಗ್ಗೆ 10:30ಕ್ಕೆ ಮುಂದೂಡಿತು.
ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಇನ್ನು ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೂ ಸಹ ಸೂಚನೆ ನೀಡಿದೆ.
`