
ಬೆಂಗಳೂರು,ಮೇ.28: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ಇಂದು ಮಧ್ಯಾಹ್ನ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಸಿದ್ಧರಾಮಯ್ಯ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದು,ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ ಹಿನ್ನಲೆಯಲ್ಲಿ ರಾಜೀನಾಮೆ ಇನ್ನಷ್ಟೇ ಅಂಗೀಕಾರವಾಗಬೇಕಿದೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ಹಾಗೂ ರಾಜೀನಾಮೆ ವದಂತಿಗಳಿಗೆ ಇದೀಗ ಅಧಿಕೃತ ತೆರೆ ಬಿದ್ದಂತಾಗಿದೆ.
ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಘೋಷಣೆ
ಇಂದಿನ ಉಪಹಾರದ ಸಭೆಯಲ್ಲಿ ಮುಂದಿನ ರಾಜಕೀಯ ನಾಯಕತ್ವದ ಕುರಿತು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಸಿದ್ದರಾಮಯ್ಯ ಅವರೇ ಸ್ವತಃ ಘೋಷಣೆ ಮಾಡಿದರು. ಈ ಮೂಲಕ ರಾಜ್ಯದ ಮುಂದಿನ ನಾಯಕತ್ವ ಯಾರು ಎಂಬ ಗೊಂದಲಕ್ಕೆ ಅವರೇ ಪೂರ್ಣವಿರಾಮ ಇಟ್ಟಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆಯಾಗಿದ್ದು, ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಶೀಘ್ರವೇ ನಡೆಯುವ ಸಾಧ್ಯತೆಗಳಿವೆ.



.
.
.
.
.
.
.
.
.
.
.
.
.
.
.
.
.
.
.
.
