ಬೆಂಗಳೂರು :ಸಿಎಂ ಬದಲಾವಣೆಯ ಚರ್ಚೆ ತೆರೆಮರೆಗೆ ಸರಿದ ಬೆನ್ನಲ್ಲೇ ಇದೀಗ ಈ ವಿಚಾರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆಯ ನಡುವೆ ಸಿಎಂ ಬದಲಾವಣೆ ವಿಚಾರ ಮುಗಿದ ಅಧ್ಯಾಯ, ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದು ಮುಂದೆಯೂ ಅವರೇ ಸಿಎಂ ಆಗಿರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆಯೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಸುರೇಶ್, ಈಗ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸದ್ಯಕ್ಕೆ ಸಿದ್ದರಾಮಯ್ಯನವರು ಸಿಎಂ ಆಗಿದ್ದು ಮುಂದೆಯೂ ಅವರೇ ಆಗಿರುತ್ತಾರೆ ಎಂದರಗೀ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದಿದೆ.