Share this news

ಕಾರ್ಕಳ,ಮಾ.06: ಸಿಎಂ‌ ಸಿದ್ದರಾಮಯ್ಯನವರು ಮಂಡಿಸಿರುವ ಈ ಸಾಲಿನ ಬಜೆಟ್ ರಾಜ್ಯದ ಶೂನ್ಯ ಬಜೆಟ್ ಇದಾಗಿದೆ ಎಂದು ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದ ಜನರನ್ನು ಸಾಲದಲ್ಲಿ ಸಿಲುಕಿಸಿದ ಸಿದ್ಧರಾಮಯ್ಯನವರು ಹೊಸ ಹೊಸ ಯೋಜನೆಗಳ ಸೃಷ್ಟಿಗೆ ಆದ್ಯತೆ ನೀಡದೇ ಇರುವುದು ರಾಜ್ಯದ ದೌರ್ಭಾಗ್ಯ. ಈ ಬಾರಿಯ ಬಜೆಟ್ ನ್ನು “11 G” ಮಾದರಿಯಲ್ಲಿ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯನವರು ಬಜೆಟ್ ನ ಪೂರ್ವಪೀಠಿಕೆಯಲ್ಲಿ ಹೆಮ್ಮೆಯಿಂದ ಹೇಳಿದ್ದಾರೆ. ಆದರೆ ಇಲಾಖಾವಾರು ಬಜೆಟ್ ವಿಶ್ಲೇಷಣೆ ನಡೆಸಿದಾಗ ಇದು “11G” ಬಜೆಟ್ ಬದಲಾಗಿ “11Lie”( ಹನ್ನೊಂದು ಸುಳ್ಳು ) ಬಜೆಟ್ ಎಂದು ವಿಶ್ಲೇಷಿಸಬಹುದಾಗಿದೆ.

ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಕಾಣದ 1.32 ಲಕ್ಷ ಕೋಟಿ ಸಾಲದ‌ ಹೊರೆಯನ್ನು ಸಿದ್ದರಾಮಯ್ಯ ಈ ಬಜೆಟ್ ಮೂಲಕ ಹೊರಿಸಿದ್ದಾರ, ರಾಜ್ಯದ ಒಟ್ಟು ಹೊಣೆಗಾರಿಕೆ 8,24,389 ಕೋಟಿ ರೂ.ಗೆ ಏರಿಕೆಯಾಗಿರುವುದು ಕಳವಳದ ಸಂಗತಿಯಾಗಿದ್ದು, ಬಂಡವಾಳ ವೆಚ್ಚವನ್ನು 74,682 ಕೋಟಿ ರೂ.ಗೆ ಇಳಿಕೆ ಮಾಡಲಾಗಿದೆ. ಯಾವ ದೃಷ್ಠಿಯಿಂದ ನೋಡಿದರೂ ಇದು ವಿತ್ಥೀಯ ಶಿಸ್ತಿನ ಪರಿಮಿತಿಯೊಳಗಿರುವ ಆಯವ್ಯಯ ಎಂದು ಒಪ್ಪಿಕೊಳ್ಳುವುದಕ್ಕೆ ಅಸಾಧ್ಯವಾಗಿದ್ದು, ರಾಜ್ಯದ ದೂರಗಾಮಿ ಭವಿಷ್ಯದ ದೃಷ್ಟಿಯಿಂದ ಅವಲೋಕಿಸಿದರೆ ಸಿದ್ದರಾಮಯ್ಯನವರು ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸುವ ಧಾವಂತದಲ್ಲಿದ್ದಾರೆ ಎಂದು ಸುನಿಲ್ ಟೀಕಿಸಿದ್ದಾರೆ.

ಕರಾವಳಿ ವಿರೋಧಿ ಬಜೆಟ್:
ಬಜೆಟ್ ನ ಪ್ರತಿಪುಟವನ್ನು ಹುಡುಕಿದರೂ ಕರಾವಳಿ ಭಾಗದ ಅಭಿವೃದ್ಧಿಗೆ ಪೂರಕವಾದ ಒಂದೇ ಒಂದು ಅಂಶಗಳು ಈ ಬಜೆಟ್ ನಲ್ಲಿ ಇಲ್ಲ. ಹೊಸ ವೈದ್ಯ ಕಾಲೇಜು ಬೇಡಿಕೆ ಈಡೇರಿಲ್ಲ.‌ಪಶ್ಚಿಮ ವಾಹಿನಿ ಯೋಜನೆಗಳಿಗೆ ಬಿಡಿಕಾಸು ಕೊಟ್ಟಿಲ್ಲ. ನಗರಾಭಿವೃದ್ಧಿ ಯೋಜನೆಗಳು ಬೆಂಗಳೂರು ಬಿಟ್ಟು ಆಚೆ ಬರದೇ ಇರುವುದು ಈ ಸರ್ಕಾರದ ಬಿಯಾಂಡ್ ಬೆಂಗಳೂರು ಯೋಜನೆಯ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಕರಾವಳಿಯ ಸಮಗ್ರ ಅಭಿವೃದ್ಧಿ ಪ್ರತ್ಯೇಕ ಕೈಗಾರಿಕಾ ಕ್ಲಸ್ಟರ್, ಪ್ರವಾಸೋದ್ಯಮದ ಬಗ್ಗೆ ಸ್ಪಷ್ಟತೆ, ಐಟಿ ಹೂಡಿಕೆ ಇತ್ಯಾದಿ ವಿಚಾರಗಳನ್ನು ನಾವು ನಿರೀಕ್ಷೆ ಮಾಡಿದ್ದೆವು. ಹೀಗಾಗಿ ಇದು ಕರಾವಳಿ ವಿರೋಧಿ ಬಜೆಟ್ ಆಗಿದೆ ಎಂದಿದ್ದಾರೆ.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *