
ಬೆಂಗಳೂರು,ಆ.06 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ 14ನೇ ಆರೋಪಿಯಾಗಿ ಜೈಲಿನಲ್ಲಿರುವ ಪ್ರದೋಶ್ ಗೆ ಇದೀಗ ತನ್ನ ತಪ್ಪಿನ ಅರಿವಾದಂತಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಲು ತನಗೆ ಅವಕಾಶ ನೀಡಬೇಕೆಂದು ಕೋರ್ಟ್ಗೆ ಮನವಿ ಸಲ್ಲಿಸಿದ್ದಾನೆ. ತನಗೆ ಈ ಪ್ರಕರಣದಲ್ಲಿ ಕ್ಷಮಾದಾನ ನೀಡಿ, ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಕೋರಿ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಈತನ ಅರ್ಜಿಯ ಕುರಿತು ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ಅರ್ಜಿಯ ಜೊತೆಗೆ ಪ್ರದೋಷ್ ಪರ ವಕೀಲರು ನ್ಯಾಯಾಲಯಕ್ಕೆ ಮತ್ತೊಂದು ಪ್ರಮುಖ ಮನವಿಯನ್ನು ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಇರುವ ಕೊಠಡಿಯಿಂದ ತನ್ನನ್ನು ಬೇರ್ಪಡಿಸಿ, ಪ್ರತ್ಯೇಕ ಜೈಲು ಕೊಠಡಿಯಿಂದ ಕೋರ್ಟ್ಗೆ ಹಾಜರುಪಡಿಸಬೇಕು ಎಂದು ಕೋರಿದ್ದಾರೆ. ದರ್ಶನ್ ಅವರ ಪ್ರಭಾವ ಅಥವಾ ಬೆದರಿಕೆಯ ಭಯದಿಂದ ಮುಕ್ತಿ ಪಡೆದು ಸ್ವತಂತ್ರವಾಗಿ ನ್ಯಾಯಾಲಯದ ಮುಂದೆ ಸತ್ಯ ಹೇಳಲು ತನಗೆ ಅವಕಾಶ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ ಎನ್ನಲಾಗಿದೆ.
ಪ್ರದೋಷ್ ಸಲ್ಲಿಸಿರುವ ಈ ಆಘಾತಕಾರಿ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯವು, ಈ ವಿಷಯದಲ್ಲಿ ರಾಜ್ಯ ಸರಕಾರಿ ಅಭಿಯೋಜಕರ ನಿಲುವೇನು ಎಂಬುದನ್ನು ಸ್ಪಷ್ಟಪಡಿಸುವಂತೆ ಸೂಚನೆ ನೀಡಿದೆ. ಪ್ರಾಸಿಕ್ಯೂಷನ್ ತನ್ನ ಅಭಿಪ್ರಾಯ ತಿಳಿಸಿದ ಬಳಿಕ ನ್ಯಾಯಾಲಯವು ಪ್ರದೋಷ್ನನ್ನು ಮಾಫಿ ಸಾಕ್ಷಿಯನ್ನಾಗಿ ಮಾಡಿಕೊಳ್ಳಬೇಕೇ ಅಥವಾ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ತಳೆಯಲಿದೆ.





.
.
.
.
.
.
.
.
.
.
.
.
.
.
.
.
.
.
.
.
