ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರದ ದಿನಾಂಕವನ್ನು ವಿಸ್ತರಿಸಿದೆ. ಭಾರತೀಯ ಕಾಲಮಾನ ಶನಿವಾರ ರಾತ್ರಿ 9:30ಕ್ಕೆ ಬರಬೇಕಿದ್ದ ತೀರ್ಪು ಇಂದು (ಆಗಸ್ಟ್ 11) ಭಾರತೀಯ ಕಾಲಮಾನ ರಾತ್ರಿ 9:30ಕ್ಕೆ ಬರಲಿದೆ.
ವಿನೇಶ್ ಫೋಗಟ್ ಫೈನಲ್‌ನ ಪಂದ್ಯಕ್ಕೂ ಮುನ್ನ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕಾಗಿ ವಿನೇಶ್ ಪೊಗಟ್ ರನ್ನು ಅನರ್ಹಗೊಳಿಸಲಾಗಿತ್ತು. ಹೀಗಾಗಿ ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಒತ್ತಾಯಿಸಿದ್ದರು.
ವಿನೇಶ್ ಅವರ ತಂಡವು ಮಾರ್ಚ್ 7ರ ಸಂಜೆ ಸಿಎಎಸ್ ಅನ್ನು ಸಂಪರ್ಕಿಸಿತ್ತು. ವಿನೇಶ್ ಅವರ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಸ್ವೀಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ಗುರುವಾರ ನಿಗದಿಪಡಿಸಲಾಗಿತ್ತು. ಆದರೆ ಭಾರತೀಯ ವಕೀಲರನ್ನು ನೇಮಿಸಲು ಸಾಧ್ಯವಾಗದ ಕಾರಣ ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಆದಾಗ್ಯೂ, ಸಿಎಎಸ್ ವಿನೇಶ್ ಅವರ ಬೇಡಿಕೆಯನ್ನು ಒಪ್ಪಿಕೊಂಡು ವಕೀಲರ ನೇಮಕಕ್ಕೆ ಕಾಲಾವಕಾಶ ನೀಡಿತ್ತು. ಹೀಗಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಇಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
`