Share this news

ಕಾರ್ಕಳ : ಜೀವನ್ ವೆಲ್ಫೇರ್ ಟ್ರಸ್ಟ್ ಕಾರ್ಕಳ ಇದರ ಸಂಸ್ಥಾಪಕಿ , ಕಾರ್ಕಳ ಅರುಣೋದಯ ವಿಶೇಷ ಶಾಲೆಯ ಮುಖ್ಯಸ್ಥೆಯಾಗಿ ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿ, ಜಿಲ್ಲಾ ರಾಜ್ಯೋತ್ಸವ ಹಾಗೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ಡ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೂಲತಃ ಬಂಟ್ವಾಳ ತಾಲೂಕಿನ ಕರಿಂಗಾನ ಗ್ರಾಮದವರಾಗಿದ್ದ ಸಿಸ್ಟರ್ ಡೊನಾಲ್ಟಾ ಪಾಯಸ್ ಇವರು ಕರಿಂಗಾಣದ ಸೈಂಟ್ ಆಂಟನಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಕಾರ್ಮೆಲ್ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣವನ್ನು, ಸೈಂಟ್ ಆಗ್ನೆಸ್ ಮಂಗಳೂರಿನಲ್ಲಿ ಪದವಿ ಶಿಕ್ಷಣವನ್ನು ಮುಗಿಸಿ ಬಿ. ಎಡ್ ಶಿಕ್ಷಣವನ್ನು ಸೈಂಟ್ ಆನ್ಸ್‌ನಲ್ಲಿ ಮುಗಿಸಿದರು. ವಿಧ್ಯಾಭ್ಯಾಸ ಮುಗಿಸಿದ ನಂತರ ಬೆಥನಿ ಸಂಸ್ಥೆಯಲ್ಲಿ ನೋವಿಶೆಡ್ ತರಬೇತಿಯನ್ನು ಪಡೆದು 1971 ರಲ್ಲಿ ಕನ್ಯಾಶ್ರೀ ಪಟ್ಟವನ್ನು ಸ್ವೀಕರಿಸಿದರು. ಇವರ ಹೆಸರು ಮಾರ್ಸೆಲಿನ್ ಪಾಯ್ಸ್ ನಿಂದ ಸಿಸ್ಟರ್ ಡೊನಾಲ್ಟಾ ಪಾಯ್ಸ್ ಎಂದು ಮರುನಾಮಕರಣ ವಾಯಿತು. ನಂತರ ಇವರು ಸಿಸ್ಟರ್ ಆಗಿ 1968 ರಲ್ಲಿ ಪ್ರೌಢಶಾಲೆ ಶಿಕ್ಷಕಿಯಾಗಿ ಸರ್ಕಾರದಿಂದ ನೇಮಕಗೊಂಡರು. ನಂತರ ರೋಸ ಮಿಸ್ತಿಕಾ ಹೈಸ್ಕೂಲ್, ಲೊಯೊಲಾ ಹೈಸ್ಕೂಲ್, ಮೈಸೂರಿನ ಕೆ. ಆರ್ ನಗರದ ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ, ಅಜೆಕಾರು ಜ್ಯೋತಿ ಹೈಸ್ಕೂಲ್‌ನಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿದರು.ಬಳಿಕ ಅರುಣೋದಯ ವಿಶೇಷ ಶಾಲೆ ಸ್ಥಾಪಿಸಿ, ವಿಕಲಚೇತನ ಮಕ್ಕಳನ್ನು ಗುರುತಿಸಿ ಅವರಿಗೆ ಶಿಕ್ಷಣವನ್ನು ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಬೇಕೆಂಬ ಉದ್ದೇಶದಿಂದ ಅರುಣೋದಯ ವಿಶೇಷ ಶಾಲೆ ಸ್ಥಾಪಿಸಿದರು‌.

ಅಂದಿನಿಂದ ಇಲ್ಲಿಯವರೆಗೆ ಈ ಶಾಲೆಯನ್ನು ಸಿಸ್ಟರ್ ಡೊನಾಲ್ಟಾ ಪಾಯ್ಸ್ ರವರು ಶ್ರಮ ಮತ್ತು ಜವಾಬ್ದಾರಿಯಿಂದ ಉಚಿತವಾಗಿ ನಡೆಸಿಕೊಂಡು ಬಂದಿದ್ದು ತನ್ನ ಜೀವನವನ್ನೇ ವಿಶೇಷ ಮಕ್ಕಳ ಸೇವೆಗಾಗಿ ಮುಡಿಪಾಗಿಟ್ಟಿದ್ದರು
ಇವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಶಾಸಕ ವಿ ಸುನಿಲ್ ಕುಮಾರ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, ಕ್ರೈಸ್ಟ್ ಕಿಂಗ್ ಎಜುಕೇಷನ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಅವೆಲಿನ್ ಲೂಯಿಸ್, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ್ ಜೈನ್, ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕಾರ್ಕಳ ತಾಲೂಕು ಅಧ್ಯಕ್ಷ ಮೊಹಮ್ಮದ್ ಗೌಸ್, ರೋಟರಿ ಕ್ಲಬ್ ಅಧ್ಯಕ್ಷ ಇಕ್ಬಾಲ್ ಅಹಮದ್ ,ಕಾಂಗ್ರೆಸ್ ಮುಖಂಡ ಪುರಸಭೆ ಮಾಜಿ ಸದಸ್ಯ ವಿವೇಕಾನಂದ ಶೆಣೈ ಸಮಾಜ ಸೇವಕಿ ಕಾಂತಿ ಶೆಟ್ಟಿ , ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್, ಪುರಸಭಾ ಮಾಜಿ ಅಧ್ಯಕ್ಷ ಸುಬಿತ್ , ರೆಹಮತ್, ಪುರಸಭಾ ಸದಸ್ಯೆ ನಳಿನಿ ಆಚಾರ್ಯ ತೀವ್ರ ಸಂತಾಪ ಸೂಚಿಸಿದ್ದಾರೆ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *