

ಕಾರ್ಕಳ, ಸೆ.23: ಕಾರ್ಕಳ ತಾಲೂಕು ಕಚೇರಿಯ ಮಹಿಳಾ ಸಿಬಂದಿಗಳಿಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ ನೀಡಿರುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಊರು ನೀಡಿದ್ದು, ಇದರಿಂದ ಸರ್ಕಾರಿ ಕಚೇರಿಗಳಲ್ಲಿ, ಸಮಾಜದಲ್ಲಿ ಮಹಿಳೆಯರ ರಕ್ಷಣೆ ಕೊರತೆ ಬಗ್ಗೆ ಸಂದೇಹ ಮೂಡುವಂತೆ ಮಾಡಿದೆ. ಈ ಕುರಿತು ತಹಶೀಲ್ದಾರ್ ವಿರುದ್ಧ ಶಿಸ್ತು ಪಾಲನಾ ಸಮಿತಿಯ ಕ್ರಮದ ಬದಲಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಕೇಸ್ ದಾಖಲಿಸಬೇಕು. ಶೋಷಣೆಗೆ ಒಳಗಾದ ಮಹಿಳೆಯರ ಗೌಪ್ಯತೆ ಕಾಪಾಡಿ, ಮಹಿಳೆಯರಿಗೆ ರಕ್ಷಣೆ ಹಾಗೂ ಆತ್ಮವಿಶ್ವಾಸವನ್ನು ಮೂಡಿಸುವ ಕೆಲಸವಾಗಬೇಕೆಂದು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಕಾರ್ಕಳ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
