Share this news

ಮಂಡ್ಯ,ಸೆ.03: ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ತಂದೆಯ ಆಸ್ತಿಗಾಗಿ 25ರ ಹರೆಯದ ಮಗ ತಂದೆಯ ಫೋಟೋ ಎಡಿಟ್ ಮಾಡಿ ವಾಟ್ಸಪ್ ಗ್ರೂಪ್ ಗೆ ಅಶ್ಲೀಲ ಸಂದೇಶ ಕಳಿಸಿ ತಂದೆಗೆ ಹಣಕ್ಕೆ ಬೇಡಿಕೆಯಿಟ್ಟು ಬ್ಲಾಕ್ ಮೇಲ್ ಮಾಡಿದ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಗನ ನೀಚ ಕೃತ್ಯದ ವಿರುದ್ದ ರೊಚ್ಚಿಗೆದ್ದ ತಂದೆ ಪೊಲೀಸರಿಗೆ ದೂರು ನೀಡಿದ್ದು, ಬೆದರಿಕೆ ಹಾಕಿದ್ದ ಆರೋಪಿ ಮಗನನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ವಿಚಿತ್ರ ಘಟನೆ ನಡೆದಿದ್ದು, ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ಗೆ ತನ್ನ ಸ್ವಂತ ಮಗನೇ ಬೆದರಿಕೆ ಹಾಕಿದ್ದು, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸ್ತಿರೋ ಉದ್ಯಮಿ ಸತೀಶ್‌ಗೆ ಮಗ ಪ್ರಣವ್ (25) ಬ್ಲಾಕ್ ಮೇಲ್ ಮಾಡಿ ಸಿಕ್ಕಿಬಿದ್ದಿದ್ದಾನೆ.
ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ತಂದೆ ಜೊತೆ ಕಿರಿಕ್ ಮಾಡಿಕೊಂಡಿದ್ದಾನೆ. ಈಗಾಗಲೇ ತಂದೆಯ ಕೋಟ್ಯಾಂತರ ರೂ ಕಳೆದು ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದ ತಂದೆಗೆ ಬುದ್ದಿ ಕಲಿಸಲು ಕೆಲವರ ಜೊತೆ ಸೇರಿ ಅಪ್ಪನಿಗೆ ಖೆಡ್ಡಾ ತೋಡಿದ್ದಾನೆ. ಅಪ್ಪನ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಹಾಗು ವಾಯ್ಸ್ ಎಡಿಟ್ ಮಾಡಿ ವಾಟ್ಸಪ್ ಗ್ರೂಪ್ ಗೆ ಹಾಕಿ‌ ಬ್ಲಾಕ್ ಮೇಲ್ ಮಾಡಿದ್ದಾನೆ.

ತನ್ನ ಮಗನಿಗೆ ಪ್ರಚೋದಿಸಿದವರು ಸೇರಿ ಮಗನ ವಿರುದ್ದ ತಂದೆ ಸತೀಶ್ ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ತಂದೆಯ ದೂರಿನ ಮೇರೆಗೆ ಆರೋಪಿಗಳಾದ ಮಗ ಪ್ರಣಬ್ ,ಮಹೇಶ, ಈಶ್ವರ್, ಪ್ರೀತಮ್ ಬಂಧನವಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದೆ.

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *