
ಬಳ್ಳಾರಿ,ಜ.03 : ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬAಧಿಸಿದAತೆ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಕರ್ತವ್ಯಲೋಪದ ಆರೋಪದ ಮೇರೆಗೆ ಸರ್ಕಾರ ಅವರನ್ನು ಅಮಾನತುಗೊಳಿಸಿತ್ತು. ಈ ಘಟನೆಯಿಂದ ಮಾನಸಿಕವಾಗಿ ನೊಂದ ಅವರು ಮಾತ್ರೆ ನುಂಗಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಅಮಾನತಾದ ಬಳಿಕ ಎಸ್ಪಿ ಪವನ್ ನೆಜ್ಜೂರ್ ಅವರು ತುಮಕೂರು ಜಿಲ್ಲೆಯ ಶಿರದ ಬರಗೂರಿನಲ್ಲಿರುವ ತನ್ನ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದ್ದು, ಅಲ್ಲಿಯೇ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಸದ್ಯ ಪವನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

.
.
