ಕಾರ್ಕಳ: ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ 16 ರಿಂದ ಸೆ.16ರವರೆಗೆ ಒಂದು ವರ್ಷ ಹಾಗೂ ಮೇಲ್ಪಟ್ಟ ಠೇವಣಿಗಳಿಗೆ ವಿಶೇಷ ಬಡ್ಡಿದರ ಘೋಷಣೆ ಮಾಡಲಾಗಿದೆ.
ಈ ಹಿಂದೆ 9% ಬಡ್ಡಿದರವನ್ನು ವಿಶೇಷ ಠೇವಣಿ ಯೋಜನೆಯಡಿ 10% ಕ್ಕೆ ಏರಿಕೆ ಮಾಡಲಾಗಿದೆ.
ಹಿರಿಯ ನಾಗರಿಕರು, ವಿಧವೆಯರು,ಮಾಜಿ ಸೈನಿಕರು ಹಾಗೂ ಸಂಘ ಸಂಸ್ಥೆಗಳ ಠೇವಣಿಗಳಿಗೆ 10.50% ಕ್ಕೆ ಹೆಚ್ಚಳ ಮಾಡಲಾಗಿದೆ.
ಈ ವಿಶೇಷ ಠೇವಣಿ ಯೋಜನೆಯು ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 8277015598 ಸಂಪರ್ಕಿಸಬಹುದು.
`