ಕಾರ್ಕಳ: ಕಾರ್ಕಳದ ಚೇತನಾ ವಿಶೇಷ ಶಾಲೆಯಲ್ಲಿ ಕಾರ್ಯಾಚರಿಸುತ್ತಿರುವ ವಾಕ್ ಮತ್ತು ಶ್ರವಣ ಚಿಕಿತ್ಸಾ ಘಟಕದಲ್ಲಿ ವಾಕ್ ಮತ್ತು ಶ್ರವಣ ವಿಭಾಗ ಯೆನಪೋಯ ಮೆಡಿಕಲ್ ಕಾಲೇಜು ಹಾಸ್ಪಿಟಲ್ ದೇರಳಕಟ್ಟೆ, ಮಂಗಳೂರು ಇವರ ಸಹಯೋಗದೊಂದಿಗೆ ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿ ಡಾ| ಸಂದೀಪ್ ಕುಡ್ವಾ ಉದ್ಘಾಟಿಸಿ ಮಾತನಾಡಿ, ಶಾರೀರಿಕವಾಗಿ ನ್ಯೂನ್ಯತೆಯ ತಪಾಸಣೆ ಹಾಗೂ ಚಿಕಿತ್ಸೆಯನ್ನು ಉಚಿತವಾಗಿ ಆಗಾಗ ಚೇತನ ವಿಶೇಷ ಶಾಲೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಮೆಚ್ಚುಗೆ ಹಾಗೂ ಶುಭ ಹಾರೈಸಿದರು.
ಯೆನಪೋಯ ವಾಕ್ ಮತ್ತು ಶ್ರವಣ ವಿಭಾಗದ ಹೆಚ್.ಒ.ಡಿ ಶ್ವೇತಾ ಪ್ರಭು ವಿಶೇಷಚೇತನರ ಹೆತ್ತವರೊಂದಿಗೆ ಸಂವಾದ ಕಾರ್ಯಕ್ರಮವನ್ನು ನಡೆಸಿದರು. ಅಸಿಸ್ಟೆಂಟ್ ಪ್ರೋಫೆಸರ್‌ಗಳಾದ ಪ್ರಿಯಾಂಕ ನಾಯಕ್ ಹಾಗೂ ಪ್ರತೀಕ್ಷಾ ಅವರ ತಂಡ ವಾಕ್ ಮತ್ತು ಶ್ರವಣ ತಪಾಸಣೆ ಹಾಗೂ ಚಿಕಿತ್ಸೆಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಭಾರತೀ ಸೇವಾ ಮಂಡಳಿ ಟ್ರಸ್ಟ್ನ ಕಾರ್ಯದರ್ಶಿ ರಘುನಾಥ್ ಶೆಟ್ಟಿ, ಕೋಶಾಧಿಕಾರಿ ವಿಜಯ್ ಕುಮಾರ್, ಯೆನಪೋಯ ಮೆಡಿಕಲ್ ಕಾಲೇಜು ಹಾಸ್ಪಿಟಲ್ ದೇರಳಕಟ್ಟೆ, ಮಂಗಳೂರು ಇಲ್ಲಿನ ಫಿಸಿಯೋಥೆರಪಿ ವಿಭಾಗದ ವೈಸ್ ಪ್ರಿನ್ಸಿಪಾಲ್ ಪ್ರೋಫೆಸರ್ ಅಸಿರ್ ಜೋನ್ ಸೋಲೋಮನ್ ಉಪಸ್ಥಿತರಿದ್ದರು.
ಶಿಕ್ಷಕಿ ಸಂಧ್ಯಾ ಅವರ ಪ್ರಾರ್ಥಿಸಿದರು. ಕಾರ್ಯದರ್ಶಿ ರಘುನಾಥ್ ಶೆಟ್ಟಿ ಸ್ವಾಗತಿಸಿ, ಶಿಕ್ಷಕಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ವಿಜಯ್ ಕುಮಾರ್ ವಂದಿಸಿದರು.