ಕಾರ್ಕಳ: ಅಜೆಕಾರು ಜ್ಯೋತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಗೆ ನವೆಂಬರ್ 10ರಂದು ಭಾನುವಾರ ಬೆಳಗ್ಗೆ 9.30 ರಿಂದ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ.
ಜ್ಯೋತಿ ಪ್ರೌಢಶಾಲೆಯಲ್ಲಿ ಕಲಿತು ಬೇರೆಬೇರೆ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವ ಅಥವಾ ವ್ಯವಹಾರ,ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಹಳೆ ವಿದ್ಯಾರ್ಥಿಗಳಿಗೆ ಆಯಾ ವಯಸ್ಸಿಗೆ ಅನುಗುಣವಾಗಿ ವಿವಿಧ ಕ್ರೀಡೆ ಹಾಗೂ ಆಟೋಟ ಸ್ಪರ್ಧೆಗಳು ನಡೆಯಲಿದೆ
ಶಾಲೆಯ ಎಲ್ಲಾ ಹಳೆ ವಿದ್ಯಾರ್ಥಿಗಳು ಸೇರಿ ಈ ಕ್ರೀಡಾಕೂಟವನ್ನು ಆಯೋಜಿಸಿದ್ದು, ಹಳೆ ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಹಾಗೂ ತಮ್ಮ ಬಾಲ್ಯದ ಸಹಪಾಠಿಗಳನ್ನು ಭೇಟಿಯಾಗಲು ಇದೊಂದು ಸದವಕಾಶವಾಗಿದ್ದು, ಹಳೆವಿದ್ಯಾರ್ಥಿಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಜ್ಯೋತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅದ್ಯಕ್ಷರು, ಉಪಾಧ್ಯಕ್ಷರು ಮತ್ತು ಸಂಘದ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: ಸುದೇಶ್ ಅವರ ಮೊಬೈಲ್ ಸಂಖ್ಯೆ : 99457 26674 ಕರೆ ಮಾಡಬಹುದಾಗಿದೆ






























































































