ಹೆಬ್ರಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 21ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಸಭಾಂಗಣದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.
ದೇವರಿಗೆ ಹೂವಿನ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮತ್ತು ಶ್ರೀ ಕೃಷ್ಣ ಲೀಲೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ, ಸ್ಥಳೀಯ ಮಕ್ಕಳ ಕೃಷ್ಣ ವೇಷ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ ನಡೆದವು.
ನಿವೃತ್ತ ಬ್ಯಾಂಕ್ ಅಧಿಕಾರಿ ಹಾಗೂ ಮುನಿಯಾಲು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಪೈ, ಕೊಡುಗೈದಾನಿ ಕಿಶೋರ್ ಶೆಟ್ಟಿ ಬೆಳಗಾವಿ, ಶ್ರೀ ಮಠದ ಎಲ್ಲಾ ಆಗುಹೋಗುಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಗುತ್ತಿಗೆದಾರ ಕಾಡುಹೊಳೆ ಹರೀಶ್ ಪೂಜಾರಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮಠದ ಅರ್ಚಕ ರಾಘವೇಂದ್ರ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಜಂಗಮೇಶ್ವರ ಮಠದ ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ, ಉದ್ಯಮಿ ಕಿಶೋರ್ ಶೆಟ್ಟಿ ಬೆಳಗಾವಿ, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷೆ ವೀಣಾ ಪ್ರಭು, ಗಿರೀಶ್ ನಾಯ್ಕ ಹಾಗೂ ಸನ್ಮಾನಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಮದಾಸ್ ನಾಯಕ್ ಸ್ವಾಗತಿಸಿದರು. ಉದಯ ಪ್ರಭು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಜ್ಯೋತಿ ಹರೀಶ್ ಸಹಕರಿಸಿದರು.
`