Share this news

ಹೆಬ್ರಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 22ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಸಭಾಂಗಣದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ನೇತೃತ್ವದಲ್ಲಿ ನಡೆಯಿತು.

ದೇವರಿಗೆ ಹೂವಿನ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮತ್ತು ಶ್ರೀ ಕೃಷ್ಣ ಲೀಲೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ, ಸ್ಥಳೀಯ ಮಕ್ಕಳ ಕೃಷ್ಣ ವೇಷ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ ನಡೆದವು.

ಮುನಿಯಾಲು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ, ಕೊಡುಗೈದಾನಿ, ಉದ್ಯಮಿ ಸುಧಾಕರ ಶೆಟ್ಟಿ ಹಾಗೂ ಮಠದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವ  ರಾಜಪುರ ಸಾರಸ್ವತ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಉದಯ ಪ್ರಭು ಕಾಡುಹೊಳೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಮಠದ ಅರ್ಚಕ ರಾಘವೇಂದ್ರ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಠದ ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸತೀಶ್ ಪ್ರಭು, ಭಜನಾ ಮಂಡಳಿ ಮಹಿಳಾ ಅಧ್ಯಕ್ಷೆ ರೇವತಿ ಶೆಟ್ಟಿ, ಹಾಗೂ ಸನ್ಮಾನಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಮದಾಸ್ ಕಾಡುಹೊಳೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಕಡಂದಲೆ ಶ್ರೀಶದಾಸ ಭಟ್ ಪ್ರಾರ್ಥಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಜ್ಯೋತಿ ಹರೀಶ್ ಸಹಕರಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *