ದಾವಣಗೆರೆ: ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ ಎಂದು ಪ್ರೊ. ಭಗವಾನ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಅವರು ದಾವಣಗೆರೆ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅವರು ರಾಮಾಯಣದ ಶ್ರೀರಾಮ ಹಾಗೂ ಮಹಾಭಾರತದ ಪಾಂಡವರು ತಮ್ಮ ತಂದೆಯಿಂದ ಹುಟ್ಟಿದವರಲ್ಲ. ಈ ಮಾತಿಗೆ ಪುರಾವೆಗಳಿವೆ ಎಂದು ಅವರು ತಿಳಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ. ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದವನು. ಅದೇ ರೀತಿ ಮಹಾಭಾರತದಲ್ಲಿ ಬರುವ ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ ಎಂದು ಅವರು ತಿಳಿಸಿದರು.