
ಬೆಂಗಳೂರು, ಏ.23: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ..ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು.
ಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ನೇರವಾಗಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಿದ್ದು karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಗೆ ಫಲಿತಾಂಶ ರವಾನೆಯಾಗಲಿದೆ.ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.


.
.
.
.
.
.
.
.
.
.
.
.
.
.
.
.
.
.
.
.
