ಬೆಂಗಳೂರು: ಮಂಗಳವಾರ ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 18 ವಷಗಳ ಬಳಿಕ ಟ್ರೋಪಿ ಗೆದ್ದುಕೊಂಡಿದೆ.
ಈ ಗೆಲುವಿನ ಸಂಭ್ರಮಾಚರಣೆಗೆ ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂಗೆ ಆಗಮಿಸಿತು. ಈವೇಳೆ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಗೇಟ್- 6ರಲ್ಲಿ ಕಾಲ್ತುಳಿತ ಸಂಭವಿಸಿ ಓರ್ವ ಆರ್‌ಸಿಬಿ ಅಭಿಮಾನಿ ಮೃತಪಟ್ಟಿದ್ದು ಸುಮಾರು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಈ ಮೆರವಣಿಗೆಯ ನಡುವೆ ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದ್ದು ಆರ್‌ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ.