ಬೆಂಗಳೂರು : ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತುಗೊಳಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಕೂಡ ಆಗಿರುವ ಕೆ. ಗೋವಿಂದರಾಜು ಮೇಲೆ ಸಚಿವ ಸಂಪುಟದಲ್ಲಿ ತೀವ್ರ ಅಸಮಾಧಾನ ಕೇಳಿಬಂದಿತ್ತು. ತರಾತುರಿಯಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಿದ್ದಕ್ಕಾಗಿ ಸಿಎಂ ಸಿಟ್ಟಾಗಿದ್ದಾರೆ ಎನ್ನಲಾಗಿದೆ