Share this news

ಬೆಂಗಳೂರು, ಮಾ.6: ಅಭಿವೃದ್ಧಿ ಯೋಜನೆಗಳನ್ನು ಮೂಲೆಗುಂಪು ಮಾಡಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಕಾಂಗ್ರೆಸ್ ನಾಯಕರನ್ನು ಸಾಕುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಸಾಲದಲ್ಲಿ ಮುಳುಗಿಸಿದೆ,ಈ ಸರಕಾರವು ಕಾಂಗ್ರೆಸ್ಸಿಗರ ಗಂಜಿ ಕೇಂದ್ರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿ ರಾಜ್ಯ ಬಜೆಟ್ ಕುರಿತು ಹೇಳಿಕೆ ನೀಡಿದ ಕುಮಾರಸ್ವಾಮಿ, ರಾಜ್ಯದ್ದು ಈಗ 4.48 ಲಕ್ಷ ಕೋಟಿ ಗಾತ್ರದ ಬಜೆಟ್ ಆಗಿದ್ದು ರಾಜ್ಯದ ಈಗಿನ ಒಟ್ಟು ಸಾಲ 8.24 ಲಕ್ಷ ಕೋಟಿ ಆಗಿದೆ. ಈ ಸಾಲ ಕಳೆದ ವರ್ಷದಿಂದ ಈ ವರ್ಷಕ್ಕೆ 1.16 ಲಕ್ಷ ಕೋಟಿಯಿಂದ 1.32 ಲಕ್ಷ ಕೋಟಿಗೆ ಏರಿದೆ.ಮುಂದಿನ ವರ್ಷಕ್ಕೆ 9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಮಾಡುವ ಸಾಲ ಯಾವುದಕ್ಕೆ ಬಳಕೆಯಾಗುತ್ತಿದೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ ದುರಂತವೆAದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು ವರ್ಷಗಳಿಂದ ಅಲ್ಲೇ ಇದೆ. ಇವರು ಸಾಲ ಮಾಡಿ ಮೋಜು ಮಾಡುತ್ತಿದ್ದಾರೆ. ಸಾಲದ ಮೇಲೆ ಸಾಲ ಮಾಡಿ 140ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರಿಗೆ ಕ್ಯಾಬಿನೆಟ್ ದರ್ಜೆ, ರಾಜ್ಯ ಸಚಿವ ದರ್ಜೆ ದಯಪಾಲಿಸಿ ಪೊಗದಸ್ತಾಗಿ ಸಾಕುತ್ತಿದ್ದಾರೆ. ಅನುತ್ಪಾದಕ ವೆಚ್ಚಕ್ಕೆ ಹಣ ಪೋಲಾಗುತ್ತಿದ್ದು, ಈ ಸರಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಿದೆ. ಸಾಲದ ದುಡ್ಡು ಅವರ ಕಿಸೆಗೆ ಹೋಗಿ ಸೇರುತ್ತಿದೆ. ಓಟು ಕೊಟ್ಟ ಮಹಾಪಾಪಕ್ಕೆ ಜನತೆಯನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ತಳ್ಳುವ ಬಜೆಟ್ ಇದಾಗಿದೆ ಎಂದು ಸಿಎgಂ ಸಿದ್ಧರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *