Share this news

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ(CAA)ಅನುಷ್ಠಾನವನ್ನು ಯಾವುದೇ ರಾಜ್ಯ ಸರ್ಕಾರಗಳು ವಿರೋಧಿಸುವಂತಿಲ್ಲ,ಇದನ್ನು ಜಾರಿಗೊಳಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಎಂದು ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸುವುದಿಲ್ಲ ಎಂದು ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಸರ್ಕಾರಗಳು ಹೇಳಿಕೆ ನೀಡಿದ ಕುರಿತು ವಾಗ್ದಾಳಿ ನಡೆಸಿದ ಅಮಿತ್ ಶಾ, ರಾಜ್ಯಗಳಿಗೆ ಸಿಎಎ ಯನ್ನು ವಿರೋಧಿಸಲು ಅವಕಾಶವಿದೆಯೇ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

ಸಿಎಎ ಸಂವಿಧಾನದ ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸುವುದಿಲ್ಲ ಮತ್ತು ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. CAA ಯನ್ನು ಮೋದಿ ಸರ್ಕಾರ ಜಾರಿಗೆ ತಂದಿದ್ದು ಅದನ್ನು ರದ್ದುಗೊಳಿಸುವುದು ಅಸಾಧ್ಯ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸಂವಿಧಾನದಲ್ಲಿ, ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಮಾಡುವ ಹಕ್ಕನ್ನು ಸಂಸತ್ತಿಗೆ ಮಾತ್ರ ನೀಡಲಾಗಿದೆ. ಸಿಎಎಗೆ ಸಂಬಂಧಿಸಿದ ಕಾನೂನು ಮತ್ತು ಅದರ ಅನುಷ್ಠಾನ ಎರಡೂ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ವಿಷಯವೇ ಹೊರತು ರಾಜ್ಯದ್ದಲ್ಲ ಎಂದು ಹೇಳಿದ್ದಾರೆ.

ಈಗ ವಿರೋಧಿಸುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ಲೋಕಸಭೆ ಚುನಾವಣೆ ನಂತರ ಒಂದೆಡೆ ಬಂದು ಸಹಕಾರ ನೀಡಲಿವೆ ಎಂದು ಪ್ರತಿಪಾದಿಸಿದರು. “ನಮ್ಮ ಸಂವಿಧಾನದ 11 ನೇ ವಿಧಿಯು ಸಂಸತ್ತಿಗೆ ಪೌರತ್ವದ ಬಗ್ಗೆ ನಿಯಮಗಳನ್ನು ಮಾಡುವ ಎಲ್ಲಾ ಅಧಿಕಾರಗಳನ್ನು ನೀಡುತ್ತದೆ. ಆದರೆ ವಿರೋಧ ಪಕ್ಷಗಳು ತುಷ್ಟೀಕರಣದ ರಾಜಕೀಯಕ್ಕಾಗಿ ಜನರಿಗೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ದೂರಿದರು.

ಈ ವಾರದ ಆರಂಭದಲ್ಲಿ ಸಿಎಎ ಅನುಷ್ಠಾನದ ನಿಯಮಗಳನ್ನು ಕೇಂದ್ರವು ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷವಾದ ಡಿಸೆಂಬರ್ 2019 ರಲ್ಲಿ ಈ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಿಎಎ ಕಾನೂನನ್ನು ಕಟುವಾಗಿ ಟೀಕಿಸಿದ್ದಾರೆ. ಅವರು ತಮ್ಮ ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *