ಬೆಂಗಳೂರು: ಇಂದಿನಿAದ ಎರಡು ವಾರಗಳ ಕಾಲ ಮಳೆಗಾಲದ ವಿಧಾಮಂಡಲ ಅಧಿವೇಶನ ನಡೆಯಲಿದ್ದು, ಪ್ರಮುಖವಾಗಿ ಈ ಬಾರಿ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿಮತ್ತು ಜೆಡಿಎಸ್ ಸಜ್ಜಾಗಿವೆ.
ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ ವಿಚಾರ ಮುಂದಿಟ್ಟು ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ ಸರ್ಕಾರದ ದ್ವಂದ್ವ ನಿರ್ಧಾರಗಳ ಬಗ್ಗೆ ಬಿಜೆಪಿ ಸಮರಕ್ಕೆ ಪ್ಲ್ಯಾನ್ ಮಾಡಿದೆ. ಇನ್ನು ರಾಜ್ಯದಲ್ಲಿ ರೈತರಿಗೆ ಯೂರಿಯಾ ಕೊರತೆ ವಿಚಾರದಲ್ಲೂ ಜಟಾಪಟಿ ನಡೆಯುವ ಸಾಧ್ಯತೆಯಿದೆ. ಗುತ್ತಿಗೆದಾರರಿಂದ 60 ಪರ್ಸೆಂಟ್ ವಸೂಲಿ ಆರೋಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಆರೋಪ, ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಕೇಸ್ ಸದ್ದು ಮಾಡುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಮಾಡಿರುವ ‘ಮತಗಳ್ಳತನ’ ಆರೋಪ ಸಂಬAಧ ಜಟಾಪಟಿ ನಡೆಯುವ ಸಾಧ್ಯತೆಯಿದ್ದು, ದ್ವೇಷ ಭಾಷಣ ನಿಯಂತ್ರಣ ಸಂಬAಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದ್ದು ಈ ಬಗ್ಗೆಯೂ ವಾಕ್ಸಮರ ನಡೆಯುವ ಸಾಧ್ಯತೆ ಇದೆ.
ವಿಪಕ್ಷಗಳಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಕೂಡ ತಂತ್ರ ಹೆಣೆದಿದೆ. ಮತಗಳ್ಳತನ ಆರೋಪ, ಕೇಂದ್ರದಿAದ ಅನುದಾನ ತಾರತಮ್ಯ ಮುಂತಾದ ವಿಚಾರ ಮುಂದಿಟ್ಟು ಕೌಂಟರ್ ಕೊಡಲಿದೆ.ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಪ್ರತಿಬಂಧಕ ವಿಧೇಯಕ, ಬಾಲ್ಯ ವಿವಾಹ ತಿದ್ದುಪಡಿ ವಿಧೇಯಕ, ಫೇಕ್ ನ್ಯೂಸ್ ಮತ್ತು ತಪ್ಪು ಮಾಹಿತಿ ನಿರ್ಬಂಧಕ ವಿಧೇಯಕ, ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಸೇರಿ ಒಟ್ಟು 27 ವಿಧೇಯಕಗಳನ್ನು ಈ ಬಾರಿಯ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧಾರ ಮಾಡಿದೆ. ಮಂಗಳವಾರ ನಡೆಯುವ ಸದನ ಸಲಹಾ ಸಮಿತಿಯಲ್ಲಿ ಸರ್ಕಾರ ತರಲಿಚ್ಚಿಸುವ ವಿಧೇಯಕ ಪಟ್ಟಿಯನ್ನು ಸರ್ಕಾರ ಮಂಡಿಸಲಿದೆ.