ಕಾರ್ಕಳ: ಮೂಡಬಿದಿರೆಯ ಆಳ್ವಾಸ್ ಎಂಜಿನಿಯರಿAಗ್ ಕಾಲೇಜಿನಲ್ಲಿ ನ.12ರಂದು ನಡೆದ 2024ರ ವಿಟಿಯು ರಾಜ್ಯಮಟ್ಟದ ಅಂತರ ಕಾಲೇಜು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಪುರುಷರ ತಂಡ ಪ್ರಥಮ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
67 ಕೆಜಿ ವಿಭಾಗದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್ ನ 7ನೇ ಸೆಮಿಸ್ಟರ್ ನ ಬಿ.ಸೂರಜ್ ಭಂಡಾರಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 7ನೇ ಸೆಮಿಸ್ಟರ್ ಮಾಹಿತಿ ವಿಜ್ಞಾನದ ರೋಹನ್ ಕುಮಾರ್ 89 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 7ನೇ ಸೆಮಿಸ್ಟರ್ ಸಿವಿಲ್ ಇಂಜಿನಿಯರಿAಗ್ ನ ಅಜಯ್ ಶೆಟ್ಟಿ 102 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ 7ನೇ ಸೆಮಿಸ್ಟರ್ ಮೆಕ್ಯಾನಿಕಲ್ ಎಂಜಿನಿಯರಿAಗ್ ನ ಸಮರ್ಜೀತ್ ಅಮೀನ್ +109 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ತಂಡವು ಒಟ್ಟಾರೆ ಚಾಂಪಿಯನ್ ಶಿಪ್ ನಲ್ಲಿ 14 ಅಂಕಗಳೊAದಿಗೆ 1 ನೇ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.