ಮುನಿಯಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇದರ ಸಹಯೋಗದೊಂದಿಗೆ ಇಂದು ಧರ್ಮಸ್ಥಳದ ಮಹೋತ್ಸವ ಸಭಾಂಗಣದಲ್ಲಿ ನಡೆದ ನೈತಿಕ ಮತ್ತು ಮೌಲ್ಯಧಾರಿತ ಪುಸ್ತಕ ಜ್ಞಾನ ವರ್ಷಿಣಿ ಪುಸ್ತಕ ಆಧಾರಿತ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿ ಸವಿ ಶೆಟ್ಟಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.
ಇವಳ ಈ ಸಾಧನೆಗೆ ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಅಭಿನಂದನೆ ಸಲ್ಲಿಸಿರುತ್ತಾರೆ