ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಆಗ್ರಹಿಸಿದರು. ಅವರು ಭಾನುವಾರ ಹುಬ್ಬಳ್ಳಿಗೆ ಭೇಟಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನೇಹಾ ಹತ್ಯೆ ಕೇಸನ್ನು ತನಿಖೆ ಮಾಡುವಲ್ಲಿ ರಾಜ್ಯ ಪೊಲೀಸರು ಅಸಮರ್ಥರಾಗಿದ್ದು ಈ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು.
ಇಡೀ ದೇಶವೇ ನೇಹಾ ಹಿರೇಮಠ ಕುಟುಂಬದ ಪರ ಇದೆ,ಆದರೆ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆ ಪ್ರಕರಣದ ಹಾದಿಯನ್ನು ತಪ್ಪಿಸುತ್ತಿದೆ. ಕರ್ನಾಟಕದ ಜನತೆ ಇದನ್ನು ಕ್ಷಮಿಸುವುದಿಲ್ಲ. ಸಿಎಂ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪರಿಣಾಮ ಬೀರುತ್ತದೆ.ನೇಹಾ ಹಿರೇಮಠ ತಂದೆಗೂ ರಾಜ್ಯ ಸರ್ಕಾರದ ಮೇಲೆ ಭರವಸೆ ಇಲ್ಲ. ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಲು ನಿರಂಜನ ಹಿರೇಮಠ ಸಹ ಮನವಿ ಮಾಡಿದ್ದಾರೆ. ಇದೇವೇಳೆ ಇಂಡಿಯಾ ಒಕ್ಕೂಟದ ಬಗ್ಗೆ ಜೆ ಪಿ ನಡ್ಡಾ ಲೇವಡಿ ಮಾಡಿದ್ದು, ಇಂಡಿಯಾ ಒಕೂಟದ ಕೆಲವರು ಜೈಲಿನಲ್ಲಿ ಇದ್ದರೆ. ಕೆಲವರು ಬೇಲ್ ಮೇಲೆ ಹೊರಗಡೆ ಇದ್ದಾರೆ. ಎಂದು ಇಂಡಿಯಾ ಕೂಡ ಮೈತ್ರಿಕೂಟದ ಕುರಿತು ಲೇವಡಿ ಮಾಡಿದರು.
ಇದು ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಂಕಲ್ಪದ ಚುನಾವಣೆ ಹೇಗೆ ದೇಶವನ್ನು ಅಭಿವೃದ್ಧಿ ಮಾಡಬೇಕೆಂದು ತಿಳಿಯುವ ಚುನಾವಣೆಯಾಗಿದೆ ಕಳೆದ ಹತ್ತು ವರ್ಷಗಳಲ್ಲಿ ರಾಜಕೀಯ ನೀತಿ ಬದಲಾಗಿದೆ ಪ್ರಧಾನಿ ಮೋದಿ ಅವರ ಗ್ಯಾರಂಟಿ ಪೂರ್ಣಗೊಳ್ಳುತ್ತದೆ ಎನ್ನುವಂತಾಗಿದೆ ಎಂದರು. ಪ್ರಜ್ಞಾವಂತ ಮತದಾರರು ದೇಶದ ಹಿತಾಸಕ್ತಿ ಆಧಾರದಲ್ಲಿ ಮತ ಹಾಕುತ್ತಾರೆಯೇ ಹೊರತು ಕಾಂಗ್ರೆಸ್ ಪಕ್ಷದ ಸುಳ್ಳು ಗ್ಯಾರಂಟಿಗಳಿಗೆ ಮಣೆ ಹಾಕುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.