Share this news

ಉಡುಪಿ,ಅ.12:ರಾಜ್ಯದ ಕಾರ್ಯನಿರತ ಪತ್ರಕರ್ತ ಸಂಘದ 2025-28 ನೇ ಅವಧಿಯ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದ್ದು, ನ.09 ರಂದು ಚುನಾವಣೆ ನಡೆಯಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ.ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಪದಾಧಿಕಾರಿಗಳ ಸಮಿತಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.

ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಚೇರಿ ಪತ್ರಿಕಾ ಭವನ ಬೆಂಗಳೂರು, ಉಡುಪಿಯ ಅಜ್ಜರಕಾಡು ಜಿಲ್ಲಾ ಕೇಂದ್ರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಹಾಗೂ ಚುನಾವಣಾಧಿಕಾರಿ ಬಿ. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *