Share this news

ಮಂಗಳೂರು: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ  ಮನೆ ಮೇಲೆ ಕಲ್ಲುತೂರಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಅಲಿಯಾಸ್ ಯಕ್ಷಿತ್, ದಿನೇಶ್ ಕುರ್ತಮೊಗೆರು ಬಂಧಿತರು. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೆಸೆದಿದ್ದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎನ್ನಲಾಗಿದ್ದು,  ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ಥಾಮರ್​ ಚಂದ್​ ಗೆಹಲೋತ್​ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಆ.22 ರಂದು ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಯ ಮೇಲೆ ರಾತ್ರಿ ಕಲ್ಲು ತೂರಾಟ ಮಾಡಿ ಪರಾರಿಯಾಗಿದ್ದರು.

 

                        

                          

                        

                          

 

`

Leave a Reply

Your email address will not be published. Required fields are marked *