Share this news

ಬೆಂಗಳೂರು,ಏ.17: ಮಹಿಳಾ ನೌಕರರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠವು ಮಹತ್ವದ ಆದೇಶ ಹೊರಡಿಸಿದೆ. ಋತುಚಕ್ರದ ಸಮಯದಲ್ಲಿ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋಟ ಸೂಚನೆ ನೀಡಿದೆ.

ಸಂಘಟಿತ ಮತ್ತು ಅಸಂಘಟಿತ ವಲಯಗಳೆರಡರಲ್ಲೂ ಈ ರಜೆ ನೀತಿಯನ್ನು ಜಾರಿಗೆ ತರಲು ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಈ ನಿಯಮವು ಈಗಾಗಲೇ ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಗೊಂಡಿದ್ದರೂ, ಹೋಟೆಲ್‌ಗಳು ಮತ್ತು ಇತರ ಖಾಸಗಿ ಸಂಸ್ಥೆಗಳಲ್ಲಿ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿಯಾದ ಚಂದ್ರಪ್ಪ ಹಣಮಂತ ಗೋಕಾಕಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮಹತ್ವದ ನಿರ್ದೇಶನವನ್ನು ನೀಡಿದ್ದು, ಮಹಿಳೆಯರ ಋತುಚಕ್ರದ ರಜೆಯನ್ನು ಅವರ ಘನತೆಯ ವಿಷಯವೆಂದು ಬಣ್ಣಿಸಿದೆ.

ಈ ಆದೇಶದಿಂದಾಗಿ ಇನ್ಮುಂದೆ ರಾಜ್ಯದ ಎಲ್ಲಾ ಹೋಟೆಲ್ ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಮ್ಮೆ ವೇತನಸಹಿತ ಋತುಚಕ್ರ ರಜೆ ಸಿಗುವುದು ಕಡ್ಡಾಯವಾಗಲಿದೆ.

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *