Share this news

ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ (ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್​ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು.

ಸಭೆಯಲ್ಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ ಅವರು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಎಂದು ಹೇಳಿದರು.

ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿ, ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು.ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ. ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ. ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಎಂದು ಹೇಳಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಎಂಜು ಕೋಪದಲ್ಲಿ ಕೊಲೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು.

 

 

 

 

 

 

 

 

 

 

Leave a Reply

Your email address will not be published. Required fields are marked *