

ಉಡುಪಿ,ನ.24: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಮಹಾಜನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ, ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಹಾಗೂ ಸಹಪಠ್ಯ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಚಿತ್ರಕಲೆಯಲ್ಲಿ ಪ್ರಥಮ ಪಿ.ಯು.ಸಿ.ಯ ವಿದ್ಯಾರ್ಥಿನಿ ಧೃತಿ ಸಂತೋಷ್ ಪೂಜಾರಿ ಪ್ರಥಮ , ಚರ್ಚಾ ಸ್ಪರ್ಧೆ (ಆಂಗ್ಲ ಭಾಷೆ)ಯಲ್ಲಿ ದ್ವಿತೀಯ ಪಿ.ಯು.ಸಿ.ಯ ಇಚ್ಛಾ ನಿರಂಜನ್ ಶೆಟ್ಟಿ ದ್ವಿತೀಯ , ರಸಪ್ರಶ್ನೆಯಲ್ಲಿ ವಂಶಿ ಕೃಷ್ಣ ದೇವರಮನೆ ಮತ್ತು ಪ್ರಣವ್ ರಾವ್ ತೃತೀಯ ಬಹುಮಾನ ಪಡೆದು ಎಲ್ಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ





.
.
.
.
.
.
.
.
.
.
.
.
.
.
.
.
.
.
.
.
