ಕಾರ್ಕಳ: ಇಂದಿನಿಂದ(ಅ.10) 14ರವರೆಗೆ ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ 40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ತಂಡವನ್ನು ಪ್ರತಿನಿಧಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಿನಾನ್ ಮತ್ತು ಸ್ತುತಿ ಪಿ. ಶೆಟ್ಟಿ ಹಾಗೂ ಡಾ.ಎನ್.ಎಸ್.ಎಎಂ ಪ್ರಥಮ ದರ್ಜೆ ಕಾಲೇಜಿನ ನಂದಿನಿ ಆಯ್ಕೆಯಾಗಿದ್ದಾರೆ.
ಈ ಸ್ಪರ್ಧೆಯು ಖೇಲೋ ಇಂಡಿಯಾ ಅಥ್ಲೆಟಿಕ್ಸ್ ಸ್ಪರ್ಧೆ 2025-2026 ರ ಅರ್ಹತಾ ಸ್ಪರ್ಧೆಯಾಗಿಯೂ ಕಾರ್ಯನಿರ್ವಹಿಸುತ್ತದೆ.