ಉಡುಪಿ: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಉಡುಪಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕ್ವಿಜ್‌ನಲ್ಲಿ ಅನಮಯ ಕೆ ದಿವಾಕರ್ ಮತ್ತು ತನಿಷ್ಕಾ ಕೆ ಶೆಟ್ಟಿ ಪ್ರಥಮ, ಜಾನಪದಗೀತೆಯಲ್ಲಿ ಸಮೃದ್ಧಿ ಪ್ರಥಮ, ಭರತನಾಟ್ಯದಲ್ಲಿ ಸ್ವಸ್ಥಿಶ್ರೀ ದ್ವಿತೀಯ, ಭಾವಗೀತೆಯಲ್ಲಿ ಶಿಪ್ರಾ ಚಾತ್ರ ದ್ವಿತೀಯ, ರಂಗೋಲಿಯಲ್ಲಿ ನವ್ಯಾ ಎಚ್ ದ್ವಿತೀಯ, ಇಂಗ್ಲೀಷ್ ಭಾಷಣದಲ್ಲಿ ಪ್ರತ್ವಿತಾ ಪಿ ಶೆಟ್ಟಿ ದ್ವಿತೀಯ ಹಾಗೂ ಧಾರ್ಮಿಕ ಪಠಣದಲ್ಲಿ ಸುಖಿ ಎಸ್ ಎನ್ ತೃತೀಯ ಬಹುಮಾನ ಪಡೆದಿದ್ದಾರೆ.
ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ. ಸಾಂಸ್ಕೃತಿಕ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.




















