ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೊಗೀಶ್ ದಿವಾಕರ್ ಮತ್ತು ತನಿಷ್ಕಾ ಶೆಟ್ಟಿ ಇವರು ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.