
ಹೆಬ್ರಿ,ಜ.02:ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ( ರಿ ) ಇವರು ನವೆಂಬರ್ ತಿಂಗಳಲ್ಲಿ ನಡೆಸಿದ ರಾಮಾಯಣ ಮಹಾಭಾರತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಜ.02 ರಂದು ಹೆಬ್ರಿ ಅಮೃತಭಾರತಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಲಾಯಿತು.
ಹೆಬ್ರಿಯ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 165 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಸಂದರ್ಭದಲ್ಲಿ ಸಾಧಕ ಆರು ವಿದ್ಯಾರ್ಥಿಗಳಾದ ಕಾವ್ಯ ಪೈ, ಗಗನ್ ಎಂ ಆಚಾರ್ಯ, ಗಗನ್ಯಾ, ಸಿಯಾ ಶೆಟ್ಟಿ, ಇಂಪನಾ, ಪುಷ್ಕರ್.ಎಸ್.ಪೂಜಾರಿ,
ಇವರಿಗೆ ಪದಕ ಪ್ರದಾನ ಮತ್ತು ಪ್ರಶಸ್ತಿ ಪತ್ರ ವಿತರಣಾ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಭಾರತಿ ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ ವಹಿಸಿ ಮಾತನಾಡಿ, ಜೀವನದಲ್ಲಿ ಶಿಕ್ಷಣದ ಜೊತೆಗೆ ರಾಮ – ಕೃಷ್ಣರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ವಿದ್ವಾನ್ ರಾಘವೇಂದ್ರ ಭಟ್ ಮುಟ್ಲುಪಾಡಿ ಮಾತನಾಡಿ ನಮ್ಮ ಅಭ್ಯುದಯಕ್ಕೆ ರಾಮನ ಆದರ್ಶ ಕೃಷ್ಣನ ನುಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಗ್ರಂಥಗಳ ಅಧ್ಯಯನ ಮಾಡಬೇಕು. ನಿರಂತರ ಅಧ್ಯಯನದಿಂದ ನಮ್ಮ ಬುದ್ಧಿಶಕ್ತಿಯನ್ನು ಉತ್ಕೃಷ್ಟಗೊಳಿಸುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ಗುರುವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪರೀಕ್ಷಾ ಸಂಯೋಜಕ ಮತ್ತು ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತೀಯ ಸಂಸ್ಕೃತಿಯ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಧರ್ಮ ಗ್ರಂಥಗಳು ಸಂಶೋಧನೆಗೆ ಇಂದಿಗೂ ಪ್ರಸ್ತುತವಾಗಿದೆ ಅಲ್ಲದೆ ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ರಾಮಾಯಣ ಮಹಾಭಾರತ ಗ್ರಂಥಗಳನ್ನು ಅಧ್ಯಯನ ಮಾಡಬೇಕು ಎಂದು ತಿಳಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸೌಪರ್ಣಿಕಾ ಜೋಶಿ ನಿರೂಪಿಸಿ ವಂದಿಸಿದರು.


.
.
